ಬೆಂಗಳೂರು: ನಗರದ ಈಜುಪಟುಗಳಾದ ಶ್ರೀಹರಿ ನಟರಾಜ್ ಹಾಗೂ ಧಿನಿಧಿ ದೇಸಿಂಗು ಪ್ಯಾರಿಸ್ ಒಲಿಂಪಿಕ್ಸ್’ಗೆ ಆಯ್ಕೆಯಾಗಿರುವದಕ್ಕೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಶುಭ ಹಾರೈಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಜುಲೈ 26 ರಿಂದ ಆರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್’ಗೆ ಆಯ್ಕೆಯಾಗಿರುವ ಬೆಂಗಳೂರು ಮೂಲದ ಈಜುಪಟುಗಳಾದ ಶ್ರೀಹರಿ ನಟರಾಜ್ ಹಾಗೂ ಧಿನಿಧಿ ದೇಸಿಂಗು ಅವರಿಗೆ ತುಂಬು ಹೃದಯದ ಅಭಿನಂದನೆಗಳು. 14 ವರ್ಷದ ಧಿನಿಧಿ ಅವರು ಮಹಿಳೆಯರ ವಿಭಾಗದಲ್ಲಿ, 23ರ ವರ್ಷದ ಶ್ರೀಹರಿ ಅವರು ಪುರುಷರ ವಿಭಾಗದಲ್ಲಿ ಆಯ್ಕೆಯಾಗುವ ಮೂಲಕ ಇಬ್ಬರು ಕನ್ನಡ ನೆಲದ ಪ್ರತಿಭೆಗಳು ಭಾರತವನ್ನು ಪ್ರತಿನಿಸುತ್ತಿದ್ದಾರೆ. ಇಬ್ಬರೂ ಕೂಡ ಗೆಲುವು ಸಾಧಿಸಿ ದೇಶಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸುತ್ತೇನೆ ಎಂದಿದ್ದಾರೆ.