Home ನಮ್ಮ ಜಿಲ್ಲೆ ಚಿಕ್ಕಮಗಳೂರು ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್‌ನಲ್ಲಿ ರೌಂಡ್‌: ಹಿಂದೂಪರ ಸಂಘಟನೆಗಳ ಆಕ್ರೋಶ

ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್‌ನಲ್ಲಿ ರೌಂಡ್‌: ಹಿಂದೂಪರ ಸಂಘಟನೆಗಳ ಆಕ್ರೋಶ

0

ಚಿಕ್ಕಮಗಳೂರು: ಈದ್ ಮಿಲಾದ್‌ ಹಬ್ಬದ ಹಿನ್ನೆಲೆ ಮುಸ್ಲಿಂ ಸಮುದಾಯದವರು ನಗರದಲ್ಲಿ ಪ್ರಮುಖ ರಸ್ತೆಗಳನ್ನು ಶೃಂಗರಿಸಿದ್ದು, ಇದೇ ವೇಳೆ ಇಬ್ಬರು ಕಿಡಿಗೇಡಿಗಳು ಪ್ಯಾಲೆಸ್ತೀನ್ ಧ್ವಜ ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿರುವ ವಿಡಿಯೋ ಹರಿದಾಡುತ್ತಿದೆ.
ನಗರದ ಕಡೂರು–ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಮುಖ್ಯರಸ್ತೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಇಬ್ಬರು ಬೈಕ್‌ನಲ್ಲಿ ಸಂಚರಿಸಿದ್ದು, ಇದನ್ನು ಗಮನಿಸಿದ ಯಾರೋ ವಿಡಿಯೋ ಮಾಡಿಕೊಂಡಿದ್ದಾರೆ.
ಪ್ಯಾಲೆಸ್ತೀನ್ ಧ್ವಜ ಹಿಡಿದು ನಗರದಲ್ಲಿ ರೌಂಡ್‌ ಹಾಕಿದ ಯುವಕರನ್ನು ಬಂಧಿಸುವಂತೆ ಹಿಂದೂಪರ ಸಂಘಟನೆ ಮುಖಂಡರು ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ ಆಗ್ರಹಿಸಿದ್ದಾರೆ. ಧ್ವಜ ಹಿಡಿದು ಓಡಾಡಿರುವ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿಕ್ಕಮಗಳೂರು ನಗರದ ಪೊಲೀಸ್ ಠಾಣೆಯ ಮುಂಭಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Exit mobile version