ಮಂಗಳೂರು: ಪ್ರತಿಭಟನೆಗೆ ಪೊಲೀಸರ ಪೂರ್ವಾನುಮತಿ ನಿರಾಕರಣೆಯನ್ನು ಉಲ್ಲಂಘಿಸಿ ಪ್ರತಿಭಟಿಸಿದ 11ಮಂದಿ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಗೇಶ್ ಕೋಟ್ಯಾನ್, ವಸಂತ ಆಚಾರಿ, ಯಾದವ ಶೆಟ್ಟಿ, ಸಂತೋಷ್ ಬಜಾಲ್, ಸುಕುಮಾರ್, ಇಮ್ತಿಯಾಜ್, ಮುನೀರ್ ಕಾಟಿಪಳ್ಳ, ಸುನಿಲ್ ಕುಮಾರ್ ಬಜಾಲ್, ಯೋಗಿಶ್, ಹಯವದನ ರಾವ್, ಸೀತಾರಾಮ ಬೇರಿಂಜ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಕರಣದ ವಿವರ: ನಗರದ ಕ್ಲಾಕ್ ಟವರ್ ಬಳಿ ಸಿಪಿಐಎಂ ಮತ್ತು ಸಿಪಿಐ ಪಕ್ಷದ ವತಿಯಿಂದ ಪ್ಯಾಲೆಸ್ತೈನ್‌ನಲ್ಲಿ ಇಸ್ರೇಲ್ ನಡೆಸಿದ ನರಹತ್ಯೆ ಖಂಡಿಸಿ, ಕದನ ವಿರಾಮ ನಡೆಸಿ ಗಾಝಾದ ಮರುನಿರ್ಮಾಣ ಹಾಗೂ ಮಾನವೀಯ ನೆರವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ನ. 4ರಂದು ಪ್ರತಿಭಟನೆ ನಡೆಸಿದ್ದರು. ಪೊಲೀಸ್ ಇಲಾಖೆಯಿಂದ ಪ್ರತಿಭಟನೆಗೆ ಅನುಮತಿ ನಿರಾಕರಿಸಿ, ಪ್ರತಿಭಟನೆ ನಡೆಸದಂತೆ ಸೂಚನೆ ನೀಡಲಾಗಿತ್ತು. ಅದನ್ನು ಧಿಕ್ಕರಿಸಿ ಪ್ರತಿಭಟನೆ ನಡೆಸಿರುವುದಕ್ಕೆ ಎಎಸ್‌ಐ ಪ್ರವೀಣ್ ಕೆ. ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಾಗಿದೆ.