ಪ್ರಜ್ವಲ್‌ನನ್ನು ಸ್ವದೇಶಕ್ಕೆ ಕರೆತರಲು ಸಹಕರಿಸಿವಂತೆ ಪಿಎಂಗೆ ಮನವಿ ಮಾಡಿದ ಸಿಎಂ

0
15

ಬೆಂಗಳೂರು: ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ಇವರನ್ನು ಇಂಟರ್ ಪೋಲ್ ಬಳಸಿ ಸ್ವದೇಶಕ್ಕೆ ಕರೆತರಲು ನೆರವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೋರಿಕೆಯ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬರೆದಿದ್ದಾರೆ.
ಮಹಿಳಾ ದೌರ್ಜನ್ಯದಂತಹ ಗುರುತರ ಆರೋಪ ಹೊತ್ತಿರುವ ಹಾಲಿ ಸಂಸದ ಹಾಗೂ ಎನ್‌ಡಿಎ ಮೈತ್ರಿಕೂಟದ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದ ತನಿಖೆಗಾಗಿ ರಾಜ್ಯವು ವಿಶೇಷ ತನಿಖಾ ತಂಡ ರಚಿಸಿದೆ. ಈ ನಡುವೆ ಆರೋಪಿಯು ರಾಜತಾಂತ್ರಿಕ ಪಾಸ್‌ಪೋರ್ಟನ್ನು ಬಳಸಿಕೊಂಡಿದ್ದು ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ. ಎಸ್.ಐ.ಟಿ.ಯು ತನಿಖೆಯನ್ನು ನಡೆಸಲು ಆರೋಪಿಯ ವಿಚಾರಣೆಯನ್ನು ನಡೆಸಬೇಕಾಗಿದೆ. ವಿದೇಶಾಂಗ ಸಚಿವಾಲಯ ಮತ್ತು ಗೃಹ ಸಚಿವಾಲಯಗಳು ತಕ್ಷಣ ಕಾರ್ಯಪ್ರವೃತ್ತವಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್ ಹಿಂಪಡೆಯುವ ಜೊತೆಗೆ ವಿದೇಶಾಂಗ ಸಚಿವಾಲಯಗಳು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರನ್ನು ಮರಳಿ ಭಾರತಕ್ಕೆ ಕರೆತರಲು ಸಹಾಯ ಮಾಡಬೇಕು ಎಂದಿದ್ದಾರೆ.

Previous articleನನ್ನ ಬೆಂಬಲ ಇದೆ ಎಂದು ಸುಳ್ಳು ಹೇಳಿ ಜನರ ಬಳಿ ಮತ ಕೇಳುತ್ತಿದ್ದಾರೆ
Next articleಕೋಟಿ ಬಾರಿ ಗೋವಿಂದನ ನಾಮ ಬರೆದ ಬೆಂಗಳೂರು ಬಾಲಕಿ