ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

0
28

ನವದೆಹಲಿ: ಹಾಸನ ಮಾಜಿ ಸಂಸದ, ಪ್ರಜ್ವಲ್ ರೇವಣ್ಣಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ತನಗೆ ಜಾಮೀನು ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು, ಪ್ರಜ್ವಲ್ ರೇವಣ್ಣ ಅವರ ಅರ್ಜಿಯನ್ನು ವಜಾಗೊಳಿಸಿತು.

Previous articleನವೆಂಬರ್ 15 ಜನಜಾತಿಯ ಗೌರವ್ ದಿವಸ್ ಆಚರಣೆ
Next articleರಾಜಕೀಯ ನಿವೃತ್ತಿ ಷೋಷಣೆ: ಡ್ರಾಮಾ ಬಾಜಿ ಸ್ಟಂಟ್