ಪ್ರಜ್ವಲ್ ರೇವಣ್ಣ ಮತ್ತೆ ಎಸ್ಐಟಿ ಕಸ್ಟಡಿಗೆ

0
10

ಬೆಂಗಳೂರು: ಪೆನ್​ಡ್ರೈವ್​ ಪ್ರಕರಣದ ಆರೋಪಿ, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನಾಲ್ಕು ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರು ದಿನಗಳ ಕಸ್ಟಡಿ ಅವಧಿ ಮುಕ್ತಾಯಗೊಂಡ ಕಾರಣ ಅವರನ್ನು ಗುರುವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರು ತನಿಖೆಗೆ ಸಹಕಾರ ನೀಡದ ಕಾರಣ ಇನ್ನಷ್ಟು ವಿಚಾರಣೆ ನಡೆಸಬೇಕಿದೆ, ಹೀಗಾಗಿ ತಮ್ಮ ವಶಕ್ಕೆ ನೀಡುವಂತೆ ಎಸ್​ಐಟಿ ಅಧಿಕಾರಿಗಳು ಮಾಡಿದ ಮನವಿಗೆ ಕೋರ್ಟ್ ಸಮ್ಮತಿ ನೀಡಿದೆ. ಎಸ್‌ಐಟಿ ಕಸ್ಟಡಿ ಅವಧಿಯನ್ನು ಜೂನ್ 10ರ ವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

Previous articleನೀವ್ ಗೆಲ್ಲೋದ್ ಯಾವಾಗ…?
Next articleವಿಧಾನಪರಿಷತ್‌ಗೆ 11 ಸದಸ್ಯರು ಅವಿರೋಧ ಆಯ್ಕೆ