ಪ್ರತಿಪಕ್ಷಗಳ ಪ್ರತಿಭಟನೆ: ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

0
6

ನವದೆಹಲಿ: ಅದಾನಿ ಗದ್ದಲ ಸೋಮವಾರ ಸಂಸತ್ತಿನ ಉಭಯ ಕಲಾಪಗಳಲ್ಲಿ ಪ್ರತಿಧ್ವನಿಸಿದ ಪರಿಣಾಮ ಕಲಾಪವನ್ನು ಮಧ್ಯಾಹ್ನ 2ಗಂಟೆಯ ವರೆಗೂ ಮುಂದೂಡಲಾಯಿತು,
ಸದನ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಆರಂಭಿಸಿದ ವಿಪಕ್ಷಗಳು ಸಂಸತ್ತಿನ ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿ ಅದಾನಿ ಪ್ರಕರಣ ತನಿಖೆಯಾಗಬೇಕು ಮತ್ತು ಈ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದವು. ಅದಾನಿ ಸಮೂಹವು ಅಕ್ರಮವಾಗಿ ಷೇರುಗಳ ಮೌಲ್ಯ ಏರಿಕೆ/ಇಳಿಕೆ ಮಾಡಿದೆ ಎನ್ನಲಾದ ಪ್ರಕರಣದ ಬಗ್ಗೆ ಚರ್ಚೆ ನಡೆಯಬೇಕು ಎಂದು ಗದ್ದಲ ಮಾಡಿದವು. ಈ ಪರಿಣಾಮ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಯಿತು.

Previous articleಬೆಂಗಳೂರಿನ ರಿಕಿ ಕೇಜ್‌ಗೆ ಮೂರನೇ ಬಾರಿ ಗ್ರ್ಯಾಮಿ ಪ್ರಶಸ್ತಿ
Next articleನಗರದಲ್ಲಿ ಪೋಲಿಸ್ ಮತ್ತು ಸೈನಿಕರ ಪಥ ಸಂಚಲನ