Home ನಮ್ಮ ಜಿಲ್ಲೆ ಕಲಬುರಗಿ ಪ್ರತಿಭಟನಾ ಸ್ಥಳದಲ್ಲಿ ಕುಸಿದುಬಿದ್ದ ಸಂಸದ ಉಮೇಶ್ ಜಾಧವ್: ಜೇಮ್ಸ್ ಆಸ್ಪತ್ರೆಗೆ ದಾಖಲು

ಪ್ರತಿಭಟನಾ ಸ್ಥಳದಲ್ಲಿ ಕುಸಿದುಬಿದ್ದ ಸಂಸದ ಉಮೇಶ್ ಜಾಧವ್: ಜೇಮ್ಸ್ ಆಸ್ಪತ್ರೆಗೆ ದಾಖಲು

0

ಕಲಬುರಗಿ: ಕಲಬುರಗಿಯಲ್ಲಿ ವೀರಶೈವ ಲಿಂಗಾಯತ ಸಮುದಾಯದವರಿಂದ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದ ಸಂಸದ ಉಮೇಶ್ ಜಾಧವ್ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ‌. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಿಭಟನೆ ವೇಳೆ ಇಕ್ಕಟ್ಟಿನ ಸ್ಥಳದಲ್ಲಿ ಸಿಲುಕಿದ ಸಂಸದ ಉಮೇಶ್ ಜಾಧವ್ ಅವರಿಗೆ ರಕ್ತದೊತ್ತಡ ಹೆಚ್ಚಾಗಿದ್ದು, ಬಿಸಿಲಿನ ತಾಪಕ್ಕೆ ತಲೆಸುತ್ತು ಬಂದು ರಸ್ತೆಯಲ್ಲಿಯೇ ಕುಸಿದು ಬಿದ್ದರು. ಬಳಿಕ ಅವರನ್ನು ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು

Exit mobile version