Home ನಮ್ಮ ಜಿಲ್ಲೆ ಚಿಕ್ಕಮಗಳೂರು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ

ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ

0

ಚಿಕ್ಕಮಗಳೂರು: ಲೋಕಸಭಾ ಸದಸ್ಯರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ರೈಲ್ವೆ ವಿಭಾಗೀಯ ವ್ಯವಸ್ಥಾಪಕರು (ಡಿಆರ್‌ಎಂ) ಒಳಗೊಂಡ ಸಲಹಾ ಸಮಿತಿಗಳನ್ನು ರಚನೆ ಮಾಡಲು ಸಾಧ್ಯದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಕೇಂದ್ರದ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಹೇಳಿದರು.
ಕಡೂರು- ಚಿಕ್ಕಮಗಳೂರು ರೈಲ್ವೆ ಮಾರ್ಗ ಮೇಲ್ದರ್ಜೆಗೆ ಹಾಗೂ ಚಿಕ್ಕಮಗಳೂರು- ಬೇಲೂರು- ಹಾಸನ ನೂತನ ರೈಲ್ವೆ ಮಾರ್ಗದ ಕಾಮಗಾರಿಯನ್ನು ಗುರುವಾರ ವೀಕ್ಷಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಲಹಾ ಸಮಿತಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆಯನ್ನು ನಡೆಸಿ ಇಲಾಖೆಗೆ ವರದಿಯನ್ನು ಕಳುಹಿಸಬೇಕೆಂದು ಸೂಚನೆ ನೀಡಲಾಗುವುದು ಎಂದರು.
ರಾಜ್ಯದ ೫೯ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದ್ದು, ಈಗಾಗಲೇ ೫೪ ರೈಲ್ವೆ ನಿಲ್ದಾಣಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇವುಗಳಲ್ಲಿ ಚಿಕ್ಕಮಗಳೂರು ನಿಲ್ದಾಣವೂ ಸಹ ಒಂದಾಗಿದೆ. ಇದಕ್ಕೆ ಈಗಾಗಲೇ ೨೬ ಕೋಟಿ ರುಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಜಿಲ್ಲಾ ಕೇಂದ್ರದಲ್ಲಿರುವ ರೈಲ್ವೆ ನಿಲ್ದಾಣಗಳು ಎಲ್ಲಾ ಮೂಲಭೂತ ಸವಲತ್ತುಗಳನ್ನು ಹೊಂದಿರಬೇಕು, ಪ್ರಮುಖವಾಗಿ ಮೀಟಿಂಗ್ ರೂಂ, ಶೌಚಾಲಯ ಕೊಠಡಿಗಳು, ಚಿಕ್ಕದಾದ ರೆಸ್ಟೋರೆಂಟ್, ಟಿಕೇಟ್ ಕೌಂಟರ್ ತೆರೆಯಲು ಉದ್ದೇಶಿಸಲಾಗಿದೆ ಎಂದರು.

Exit mobile version