Home News ಪ್ರಥಮ ಚಿಕಿತ್ಸೆ ಕೊಡಿಸಲು ಮೂರು ಗಂಟೆ

ಪ್ರಥಮ ಚಿಕಿತ್ಸೆ ಕೊಡಿಸಲು ಮೂರು ಗಂಟೆ

ಫೋನ್ ನಲ್ಲಿ ಮಾತುಕತೆ ನಡೆಸುತ್ತಾ ಏನೋ ಷಡ್ಯಂತ್ರ ಮಾಡುತ್ತಿದ್ದಾರೆ.

ಬೆಂಗಳೂರು: ತಮ್ಮ ಜೀವಕ್ಕೆ ಅಪಾಯವಿದೆ, ಕಾಂಗ್ರೆಸ್ ಸರ್ಕಾರ ಕೊಲೆ‌ ಮಾಡಲು ಸಂಚು ರೂಪಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಸಿ. ಟಿ. ರವಿ ಹೇಳಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿದ ಪೊಲೀಸರು ರಾತ್ರಿಯಿಡಿ ಅವರನ್ನು ಸುತ್ತಾಡಿಸಿದ್ದಾರೆ ಈ ಕುರಿತಂತೆ ಸಿ ಟಿ ರವಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಪೊಲೀಸ್ ಕಸ್ಟಡಿಯಲ್ಲಿ ತಲೆಗೆ ಆದ ಗಾಯಕ್ಕೆ ಪ್ರಥಮ ಚಿಕಿತ್ಸೆ ಕೊಡಿಸಲು ಮೂರು ಗಂಟೆ ತೆಗೆದುಕೊಂಡ ಕರ್ನಾಟಕ ಪೊಲೀಸರು. ಈಗ ಕಳೆದ ಐದಾರು ಗಂಟೆಗಳಿಂದ ಪೊಲೀಸ್ ವಾಹನದಲ್ಲಿ ಕೂರಿಸಿಕೊಂಡು ಸುತ್ತಾಡಿಸುತಿದ್ದಾರೆ.

ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಫೋನ್ ನಲ್ಲಿ ಮಾತುಕತೆ ನಡೆಸುತ್ತಾ ಏನೋ ಷಡ್ಯಂತ್ರ ಮಾಡುತ್ತಿದ್ದಾರೆ. ನನಗಾಗುವ ಯಾವುದೇ ತೊಂದರೆಗೆ ಪೊಲೀಸ್ ಇಲಾಖೆ ಹಾಗು ಕಾಂಗ್ರೇಸ್ ಸರ್ಕಾರವೇ ಕಾರಣ ಎಂದು  ಆಕ್ರೋಶ ವ್ಯಕ್ತಪಡಿಸಿದ್ದಾರೆ.

Exit mobile version