ಹುಬ್ಬಳ್ಳಿ: ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮೂರು ವಿಭಾಗಗಳಲ್ಲಿ ವಿದ್ಯಾರ್ಥಿನಿಯರೇ ಪ್ರಥಮ ಸ್ಥಾನ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಐಎನ್ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್. ಸಂಜನಾಬಾಯಿ 597 ಅಂಕಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್ನ ಕೆನರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಶ್ರೀ ಎಸ್. 599 ಅಂಕಗಳಿಸುವ ಮೂಲಕ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್ನ ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ 597 ಅಂಕಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದಾರೆ.