Home ನಮ್ಮ ಜಿಲ್ಲೆ ಕಲಬುರಗಿ ಪ್ರಧಾನಮಂತ್ರಿಗಳ ತಾತ್ಕಾಲಿಕ ಪ್ರವಾಸ

ಪ್ರಧಾನಮಂತ್ರಿಗಳ ತಾತ್ಕಾಲಿಕ ಪ್ರವಾಸ

0

ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾತ್ಕಾಲಿಕ ಪ್ರವಾಸ ಪಟ್ಟಿಯಂತೆ ಇದೇ ಜನವರಿ 19 ರಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 9.35 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ಬೆಳಿಗ್ಗೆ 9.40 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೋಲಾಪುರಕ್ಕೆ ಪ್ರಯಾಣಿಸಿ ಅಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮರಳಿ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ನಂತರ ಮಧ್ಯಾಹ್ನ 1 ಗಂಟೆ 5 ನಿಮಿಷಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

Exit mobile version