ಗಯಾನ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಗಯಾನಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ‘ದಿ ಆರ್ಡರ್ ಆಫ್ ಎಕ್ಸಲೆನ್ಸ್’ಗೆ ಭಾಜನರಾಗಿದ್ದು, ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ತಮ್ಮ ದೇಶಕ್ಕೆ ಸಹಾಯ ಮಾಡಿದ್ದಕ್ಕಾಗಿ ಮತ್ತು ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸಲು ಡೊಮಿನಿಕಾವು ಪ್ರಧಾನಿ ನರೇಂದ್ರ ಮೋದಿಗೆ ತನ್ನ ದೇಶದ ಅತ್ಯುನ್ನತತ ರಾಷ್ಟ್ರೀಯ ಪ್ರಶಸ್ತಿಯಾದ ‘ಡೊಮಿನಿಕಾ ಅವಾರ್ಡ್ ಆಫ್ ಹಾನರ್’ ನೀಡಿ ಗೌರವಿಸಿದೆ. ಬಳಿಕ ಮಾತನಾಡಿ ಮೋದಿಯವರು ಇದು 140 ಕೋಟಿ ಭಾರತೀಯರಿಗೆ ಸಂದ ಗೌರವ. ಇದು ನಮ್ಮ ಸಂಬಂಧಕ್ಕೆ, ನಿಮ್ಮ ಬದ್ಧತೆಗೆ ಜೀವಂತ ಸಾಕ್ಷಿಯಾಗಿದೆ. ಈ ಗೌರವ ಪ್ರತಿಯೊಂದು ಕ್ಷೇತ್ರದಲ್ಲೂ ಮುಂದುವರಿಯಲು ಇನ್ನಷ್ಟು ಸ್ಫೂರ್ತಿ ನೀಡುತ್ತದೆ” ಎಂದರು.