ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

0
12

ಮಾಸ್ಕೋ: ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಯಲ್ಲಿ ಅಸಾಧಾರಣ ಸೇವೆಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ನರೇಂದ್ರ ಮೋದಿ ಅವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್’ ಪ್ರದಾನ ಮಾಡಿದರು.
ಇನ್ನು ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ನರೇಂದ್ರ ಮೋದಿ ಅವರು “ನನಗೆ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನಾನು ಅದನ್ನು ಭಾರತದ ಜನರಿಗೆ ಅರ್ಪಿಸುತ್ತೇನೆ” ಎಂದಿದ್ದಾರೆ.

Previous articleಭೀತಿ ಮೂಡಿಸಿದ್ದ ಚಡ್ಡಿ ಗ್ಯಾಂಗ್ ವಶಕ್ಕೆ
Next articleರೈತರ ಸಂಕಷ್ಟಕ್ಕೆ ಸ್ಪಂದಿಸಲಾಗದ ಬಲಹೀನ ರಾಜ್ಯ ಸರ್ಕಾರ