ಪ್ರಧಾನಿ ಮೋದಿಗೆ ‘ಶ್ರೀಲಂಕಾ ಮಿತ್ರ ವಿಭೂಷಣ’ ಪ್ರಶಸ್ತಿ ಪ್ರದಾನ

0
42

ಕೊಲೊಂಬೊ: ಪ್ರಧಾನಿ ನರೇಂದ್ರ ಮೋದಿಯವರಿಗೆ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು ‘ಮಿತ್ರ ವಿಭೂಷಣ’‌ ಅತ್ಯುನ್ನತ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.
ಶ್ರೀಲಂಕಾ ಸರ್ಕಾರವು ಶ್ರೀಲಂಕಾದೊಂದಿಗೆ ಉತ್ತಮ ಸಂಬಂಧ ಹೊಂದಿರುವ ದೇಶಗಳ ಮುಖ್ಯಸ್ಥರಿಗೆ ಈ ಗೌರವವನ್ನು ನೀಡಲಾಗುತ್ತಿದ್ದು, ಭಾರತವು ಐತಿಹಾಸಿಕವಾಗಿ ಶ್ರೀಲಂಕಾದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದೆ. ಅಲ್ಲದೆ, ಶ್ರೀಲಂಕಾ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದಾಗ, ಸಹಾಯಹಸ್ತ ಚಾಚಿದ ಮೊದಲ ದೇಶ ಭಾರತವಾಗಿತ್ತು. ಈಗ ಈ ಉತ್ತಮ ಸಂಬಂಧಗಳನ್ನು ಗುರುತಿಸಿ, ಶ್ರೀಲಂಕಾ ಸರ್ಕಾರ ಪ್ರಧಾನಿ ಮೋದಿಯವರಿಗೆ ಈ ಗೌರವವನ್ನು ನೀಡಿದೆ. ಪ್ರಶಸ್ತಿ ಸ್ವೀಕರಿಸಿದ ಬಳಿಕ ಭಾರತದ 140 ಕೋಟಿ ದೇಶವಾಸಿಗಳಿಂದ ಬಂದ ಗೌರವ ಎಂದು ಮೋದಿ ಬಣ್ಣಿಸಿದ್ದಾರೆ. ಕಳೆದ ವರ್ಷ ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸಾ ನಾಯಕೆ ಅಧಿಕಾರ ವಹಿಸಿಕೊಂಡ ನಂತರ ಇದು ಪ್ರಧಾನಿ ಮೋದಿಯವರ ಮೊದಲ ಭೇಟಿಯಾಗಿದೆ.

https://www.facebook.com/share/v/18cQkD7F3K

Previous articleಪ್ರಚಾರ ಜಾಸ್ತಿ, ಕೆಲಸ ಕಮ್ಮಿ, ಇದು ಸರ್ಕಾರದ ನೀತಿ!
Next articleವಿನಯ್ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ವಿಜಯೇಂದ್ರ ಒತ್ತಾಯ