ಪ್ರಧಾನಿ ಮೋದಿಯವರ ವಿಮಾನದಲ್ಲಿ ತಾಂತ್ರಿಕ ದೋಷ

0
29
ವಿಮಾನ
ಸಾಂದರ್ಭಿಕ ಚಿತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಇದರಿಂದಾಗಿ ಪ್ರಧಾನಿಯವರ ದೆಹಲಿ ಪ್ರಯಾಣ ವಿಳಂಬಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಬಿಹಾರದ ಜಮುಯಿಯಲ್ಲಿ ನಡೆದ ಜನಜಾತಿಯ ಗೌರವ್ ದಿವಸ್‌ನಲ್ಲಿ ಪಾಲ್ಗೊಂಡು ದೆಹಲಿಗೆ ಹಿಂತಿರುಗವ ವೇಳೆ ಈ ಘಟನೆ ಸಂಭವಿಸಿದೆ, ಜಾರ್ಖಂಡ್‌ನ ದೇವಘರ್ ವಿಮಾನ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ. ಇದರಿಂದಾಗಿ ಪ್ರಧಾನಿ ಮೋದಿ ವಿಮಾನ ನಿಲ್ದಾಣದಲ್ಲೇ ಉಳಿಯಬೇಕಾಯಿತು. ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ.

Previous articleಧಾರ್ಮಿಕ ಕಾರ್ಯಕ್ರಮದಲ್ಲಿ ಪತ್ರಿಕೆ ಬಿಡುಗಡೆ ಮಾಡಿದ ಕಾಶಪ್ಪನವರ
Next articleರಾಸಾಯನಿಕ ಸಿಂಪಡಿಸಲು ಡ್ರೋನ್ ಬಳಕೆ