ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಭದ್ರತಾ ಸನ್ನದ್ಧತೆಯ ಕುರಿತಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಹತ್ವದ ಸಭೆ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನಿವಾಸದಲ್ಲಿ ನಡೆದ 40 ನಿಮಿಷಗಳ ಸಭೆಯಲ್ಲಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭದ್ರತಾ ಸಿದ್ಧತೆಯ ಬಗ್ಗೆ ಅವರಿಗೆ ವಿವರಿಸಿದರು. ಭಾರತೀಯ ಸಶಸ್ತ್ರ ಪಡೆಗಳ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಅನಿಲ್ ಚೌಹಾಣ್ ಜೊತೆ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಅನಿಲ್ ಚೌಹಾಣ್ ಜೊತೆ ಮೂರು ಸೇನೆಗಳ ಸಾಮರ್ಥ್ಯದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚರ್ಚೆ ನಡೆಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಿ ಪಡೆಗಳು ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ “ಅಪ್ರಚೋದಿತ” ಗುಂಡಿನ ದಾಳಿ ನಡೆಸಿವೆ. ಪಾಕಿಸ್ತಾನವು ಸತತ ನಾಲ್ಕನೇ ಬಾರಿಗೆ ಕದನ ವಿರಾಮವನ್ನು ಉಲ್ಲಂಘಿಸಿದೆ.