ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಗೌಡ

0
12

ನವದೆಹಲಿ: ದೇಶದ ಪ್ರಗತಿಗೆ ದೇವೇಗೌಡರ ಅನುಸರಣೀಯ ಕೊಡುಗೆಯನ್ನು ಭಾರತವು ಬಹುವಾಗಿ ಗೌರವಿಸುತ್ತದೆ ಎಂದು ಪ್ರದಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ , ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ಹಾಗೂ ಶಾಸಕ ಹೆಚ್​ಡಿ ರೇವಣ್ಣ ಇವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್​ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಕುರಿತು ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ದೇಶದ ಪ್ರಗತಿಗೆ ದೇವೇಗೌಡರ ಅನುಸರಣೀಯ ಕೊಡುಗೆಯನ್ನು ಭಾರತವು ಬಹುವಾಗಿ ಗೌರವಿಸುತ್ತದೆ. ವೈವೈವಿಧ್ಯಮಯ ನೀತಿ ವಿಷಯಗಳ ಕುರಿತು ಅವರ ಆಲೋಚನೆಗಳು ಒಳನೋಟವುಳ್ಳವು ಮತ್ತು ಭವಿಷ್ಯದ ದೃಷ್ಟಿಕೋನ ಹೊಂದಿದವುಗಳಾಗಿವೆ’ ಎಂದು ಬರೆದುಕೊಂಡಿದ್ದಾರೆ.

Previous articleಕೆಲಕಾಲ ಸ್ಥಗಿತವಾಗಿದ್ದ ಸಾಮಾಜಿಕ ಜಾಲತಾಣ X ಪುನರಾರಂಭ
Next articleನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನ ಲೋಕಾರ್ಪಣೆ