ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯ ಪ್ರಭಾರ ಕುಲಪತಿಯಾಗಿ ಕಾನೂನು ವಿಭಾಗದ ಡೀನ್ ಡಾ. ಮಂಜುಳಾ ಬುಧವಾರ ಅಧಿಕಾರ ವಹಿಸಿಕೊಂಡರು.
ಕುಲಪತಿ ಡಾ. ಕೆ.ಬಿ. ಗುಡಸಿ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಸೇವಾ ಜೇಷ್ಠತೆ ಆಧಾರದಲ್ಲಿ ಕಾನೂನು ವಿಭಾಗದ ಡಾ. ಮಂಜುಳಾ ಅವರು ಅಧಿಕಾರ ವಹಿಸಿಕೊಂಡರು. ಡಾ. ಗುಡಸಿ ಅವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕುಲಸಚಿವ ಚನ್ನಪ್ಪ ಸೇರಿದಂತೆ ಇತರರು ಇದ್ದರು.