ಪ್ರಮಾಣವಚನದಲ್ಲಿ ಪಾಲ್ಗೊಂಡ ಪೇಜಾವರ ಶ್ರೀ

0
7

ಬೆಂಗಳೂರು: ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀ ಸೇರಿದಂತೆ ಮೂವರು ಸಾಕ್ಷಿಯಾದರು.
ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವಿಶ್ವಸ್ಥರೂ ಆಗಿರುವ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದ ಶ್ರೀಗಳು ಕೇಂದ್ರದ ಆಹ್ವಾನದ ಮೇರೆಗೆ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ನೀಡಿದರು.
ದಾವಣಗೆರೆಯ ಸಮಾಜ ಸೇವಕ, ರಾಜ್ಯ ಯೋಜನಾ ಪ್ರಾಧಿಕಾರದ ಮಾಜಿ ಸದಸ್ಯರು ಮತ್ತು ಬಿಜೆಪಿ ಮುಖಂಡ ಡಾ.ನಸೀರ್ ಅಹ್ಮದ್, ಚಾಮರಾಜನಗರ ತಾಲೂಕಿನ ಉಮ್ಮತೂರು ಗ್ರಾಮದ ವರ್ಷಾ ಭಾಗವಹಿಸಿದ್ದರು.
ಕಳೆದ ನವೆಂಬರ್ ೨೬ರಂದು ನಡೆದ `ಮನ್ ಕಿ ಬಾತ್’ನ ೧೦೭ನೇ ಆವೃತ್ತಿಯಲ್ಲಿ ವರ್ಷಾ ಅವರ ಕಾರ್ಯಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದರಿಂದ ಪ್ರೇರೇಪಣೆಗೊಂಡ ವರ್ಷಾ, ಬಾಳೆ ಗಿಡದ ನಾರಿನಿಂದ ಕರಕುಶಲ ವಸ್ತುಗಳು, ಉಪ್ಪಿನ ಕಾಯಿ, ಚಟ್ನಿಪುಡಿ ಸೇರಿದಂತೆ ವಿವಿಧ ತಿನಿಸು ತಯಾರಿಸುವುದರೊಂದಿಗೆ ಉದ್ಯಮ ಸ್ಥಾಪಿಸಿ ಐವರು ಮಹಿಳೆಯರು, ಇಬ್ಬರು ಪುರುಷರಿಗೆ ನೌಕರಿ ನೀಡಿ ಮಾದರಿಯಾಗಿದ್ದರು.

Previous articleಜೀವ ಬೆದರಿಕೆ: ಶಾಸಕ ಬೆಲ್ಲದ ಸೇರಿ ಮೂವರ ವಿರುದ್ಧ ದೂರು
Next articleಕಾಶಿಯಿಂದ ಕಲಿತುಬಂದ ವಿದ್ಯೆ