ಉತ್ತರ ಪ್ರದೇಶ: ಮಹಾ ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ಕಾರು ಬಸ್‌ಗೆ ಡಿಕ್ಕಿಯಾದ ಪರಿಣಾಮ ಹತ್ತು ಜನರು ಸಾವನ್ನಪ್ಪಿದ್ದಾರೆ.
ಶುಕ್ರವಾರ ತಡರಾತ್ರಿ ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯಲ್ಲಿ ಛತ್ತೀಸ್‌ಗಢದಿಂದ ಮಹಾಕುಂಭಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ಕಾರು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಎಂದು ಯಮುನಾನಗರದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ವಿವೇಕ್ ಚಂದ್ರ ಯಾದವ್ ತಿಳಿಸಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ವರೂಪ್ ರಾಣಿ ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದ ಬಗ್ಗೆ ತಿಳಿದುಕೊಂಡು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ ಎಂದು ಸಿಎಂಒ ಪ್ರಕಟಣೆ ತಿಳಿಸಿದೆ. ತಕ್ಷಣವೇ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಮುಖ್ಯಮಂತ್ರಿ ಹಾರೈಸಿದರು. ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಭಕ್ತರು ಛತ್ತೀಸ್‌ಗಢದ ಕೋರ್ಬಾಗೆ ಸೇರಿದವರು. ಅವರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಕುಂಭಕ್ಕೆ ಹೋಗುತ್ತಿದ್ದರು.