ಪ್ರಯಾಣಿಕರ ಗಮನಕ್ಕೆ: ಪಯಣಿಸುವ ಮುನ್ನ

0
17
ವಿಮಾನ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೆಲವು ವಾಯುಯಾನ ಪ್ರದೇಶಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಜಾರಿಯಲ್ಲಿದ್ದು, ಇದು ನಮ್ಮ ಸಂಪರ್ಕ‌ ಜಾಲದಲ್ಲಿನ ಕೆಲವು ವಿಮಾನಗಳ ಸೇವೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ತಿಳಿಸಿದೆ. ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುನ್ನ, ತಾವು ಪ್ರಯಾಣ ಮಾಡಲಿರುವ ವಿಮಾನಗಳ ವೇಳಾಪಟ್ಟಿಗಳ ಕುರಿತು ಆಯಾ ವಿಮಾನಯಾನ ಸಂಸ್ಥೆಗಳ ಜೊತೆಗೆ ಸಂಪರ್ಕಿಸಿ ಪರಿಶೀಲಿಸಲು ವಿನಂತಿಸುತ್ತೇವೆ. ಪ್ರಯಾಣಿಕರು ತಮ್ಮ ವಿಮಾನಗಳ ವೇಳಾಪಟ್ಟಿಯಲ್ಲಿನ ಬದಲಾವಣೆಗಳನ್ನು ಆಯಾ ವಿಮಾನಯಾನ ಸಂಸ್ಥೆಗಳ ಅಧಿಕೃತ ಟ್ವಿಟರ್ (ಎಕ್ಸ್) ಖಾತೆಗಳ ಮೂಲಕ ಪಡೆಯಬಹುದಾಗಿದೆ ಎಂದು ತಿಳಿಸಿದೆ.

ವಿಮಾನಯಾನ ಸಂಸ್ಥೆಗಳ ಅಧಿಕೃತ ಎಕ್ಸ್ ಖಾತೆಗಳು: ಇಂಡಿಗೋ : @IndiGo6E, ಏರ್ ಇಂಡಿಯಾ : @airindia, ಏರ್ ಇಂಡಿಯಾ ಎಕ್ಸ್‌ಪ್ರೆಸ್ : @AirIndiaX, ಆಕಾಸಾ ಏರ್ : @AkasaAir,

Previous articleಸಿಂಧೂರಕ್ಕೆ ಕೈ ಹಾಕಿದ ಉಗ್ರರಿಗೆ ತಕ್ಕ ಶಾಸ್ತಿ
Next articleಆಪರೇಷನ್ ಸಿಂದೂರ ಮೂಲಕ ಅಮಾಯಕ ಹಿಂದೂಗಳ ಪ್ರತಿ ಹನಿ ರಕ್ತಕ್ಕೂ ನ್ಯಾಯ