Home ಅಪರಾಧ ಪ್ರಲ್ಹಾದ್ ಜೋಶಿ ಸಹೋದರನ ವಂಚನೆ ಪ್ರಕರಣ: ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಪ್ರಲ್ಹಾದ್ ಜೋಶಿ ಸಹೋದರನ ವಂಚನೆ ಪ್ರಕರಣ: ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

0

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿ ಸಹಿತ ಮೂವರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 2 ಕೋಟಿ ರೂ. ಸುಲಿಗೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸಹೋದರ ಗೋಪಾಲ ಜೋಶಿ ಮತ್ತಿತರರು ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಲು ಕೋರಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಇಡೀ ಪ್ರಕರಣ ಹಣದ ವಿಚಾರಕ್ಕೆ ಸಂಬಂಧಿಸಿದ್ದಾಗಿದೆ. ಹೀಗಾಗಿ, ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ವಿಧಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖ ಮಾಡಿದೆ. ಈ ಹಿನ್ನೆಲೆ ಪೊಲೀಸ್ ಕಸ್ಟಡಿಯಲ್ಲಿರುವ ಅರ್ಜಿದಾರರನ್ನು ಕಾನೂನಿನ ಅನ್ವಯ ಬಿಡುಗಡೆ ಮಾಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ.
ಸುನೀತಾ ಚವ್ಹಾಣ ನೀಡಿದ ದೂರಿನ ಹಿನ್ನೆಲೆ ಗೋಪಾಲ್ ಜೋಶಿ, ಅವರ ಮಗ ಅಜಯ್‌ ಹಾಗೂ ಸಹೋದರಿ ವಿರುದ್ಧ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Exit mobile version