ಪ್ರಲ್ಹಾದ್ ಜೋಶಿ ಸಹೋದರನ ಹುಡುಕಾಟ

0
39

ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಸಹೋದರ ತಲೆ ಮರೆಸಿಕೊಂಡಿದ್ದು ಹುಡುಕಾಟ ನಡೆಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅವರ ವಿರುದ್ಧ ದೂರು ಬಂದಾಗ ಗಂಭೀರವಾಗಿ ತೆಗೆದುಕೊಳ್ಳಬೇಕಲ್ಲವೇ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಗೋಪಾಲ್ ಜೋಷಿ ಎಂಬುವರು ತಲೆಮರೆಸಿಕೊಂಡಿದ್ದು ತನಿಖೆ ಮುಂದುವರಿದಿದೆ. ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ
ಈ ಪ್ರಕರಣದಲ್ಲಿ ಪ್ರಲ್ಹಾದ್ ಜೋಷಿ ಅವರ ಪಾತ್ರ ಇರುವುದು ನನಗೆ ಗೊತ್ತಿಲ್ಲ. ಬಂಧಿತರನ್ನು ವಿಚಾರಣೆ ನಡೆಸಿ, ಹೇಳಿಕೆ ಪಡೆದಾಗ ಯಾರಿದ್ದಾರೆ ಎಂಬುದು ಗೊತ್ತಾಗುತ್ತದೆ. ತನಿಖೆಗೆ ಮೊದಲು ಹೇಳುವುದು ಸರಿಯಲ್ಲ. ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಗೊತ್ತಾಗಲಿದೆ. ವರದಿ ಬಾರದೆ ಏನು ಹೇಳಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Previous articleನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಗುಪ್ತಾ ನೇಮಕ
Next articleಇಡಿ ಜನರ ವಿಶ್ವಾಸ ಕಳೆದುಕೊಂಡಿದೆ