ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರ ರಕ್ಷಣೆಗೆ  ಸರ್ಕಾರ ಬದ್ಧ

0
104

ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ.

ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ.
ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ.

ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದಿದ್ದಾರೆ.

Previous articleಬೆಳ್ಳಂಬೆಳಿಗ್ಗೆ ಬ್ರಹ್ಮಾವರಕ್ಕೆ ಲೋಕಾಯುಕ್ತ ಎಂಟ್ರಿ – ಅಧಿಕಾರಿಗಳು ಕಂಗಾಲು
Next articleಒಂದೇ ಕುಟುಂಬದ ಮೂವರು ಯುವಕರು ನೀರು ಪಾಲು