ಪ್ರಸಾದ ಸೇವಿಸಿ ಮೂವರು ಸಾವು, ಹಲವರು ಅಸ್ವಸ್ಥ

0
43

ತುಮಕೂರು: ಮಧುಗಿರಿ ತಾಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಪ್ರಸಾದ ಸೇವಿಸಿ ಮೂವರು ಮೃತಪಟ್ಟು, ಹಲವರು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಬುಳ್ಳಸಂದ್ರದ ನಿವಾಸಿಗಳಾದ ತಿಮ್ಮಕ್ಕ(84) ಮತ್ತು ಗಿರಿಯಮ್ಮ (80) ಮತ್ತು ಆಂಧ್ರಪ್ರದೇಶದ ಮಡಕಶಿರಾ ತಾಲೂಕಿನ ಸಿದ್ಧಗಿರಿ ಗ್ರಾಮದ ಕಾಟಮ್ಮ(45) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಶ್ರಾವಣ ಮಾಸ ಹಿನ್ನೆಲೆಯಲ್ಲಿ ಕರಿಯಮ್ಮ ಮತ್ತು ಮುತ್ತುರಾಯ ಭೂತಪ್ಪ ದೇವರ ವಾರ್ಷಿಕ ಜಾತ್ರೆ ಶನಿವಾರ ಆರಂಭವಾಯಿತು. ಭಾನುವಾರ ಮಾಂಸಾಹಾರಿ ಆಹಾರವನ್ನು ಸೇವಿಸಿದ ನಂತರ, ಹಲವರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ.

Previous articleನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ
Next articleಅಕ್ಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿರುವ ಸಭಾಪತಿ ಹೊರಟ್ಟಿ