ಬೆಂಗಳೂರು: ರಾಜ್ಯದ ಹಲವಾರು ಪೊಲೀಸ್ ಠಾಣೆಗಳಿಗೆ ಬೇಕಾಗಿದ್ದ ನಟೋರಿಯಸ್ ಅಪರಾಧಿ ಹೊಟ್ಟೆ ಮಂಜನನ್ನು ಸದಾಶಿವನಗರ ಸಿಗ್ನಲ್‌ನಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ದೊಡ್ಡಲಿಂಗಯ್ಯ ತನ್ನ ಪ್ರಾಣದ ಹಂಗನ್ನು ಲೆಕ್ಕಿಸದೆ ಬೆನ್ನಟ್ಟಿ ಹಿಡಿದ ಸಿಸಿಟಿವಿಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಂಜೇಶ್ ಈತನನ್ನು ಕೊರಟಗೆರೆ ಪೊಲೀಸ್ ಠಾಣೆ ಸಿಬ್ಬಂದಿ, ಪತ್ತೆಮಾಡಿ ಸದಾಶಿವನಗರ ಸಂಚಾರ ಪೊಲೀಸ್ ಠಾಣೆ ಸಿಗ್ನಲ್ ಬಳಿ ಹಿಡಿದುಕೊಂಡಾಗ ಆರೋಪಿತನು ಪರಾರಿಯಾಗಲು ಯತ್ನಿಸಿದ್ದು, ಸಿಗ್ನಲ್ ನಲ್ಲಿ ಕರ್ತವ್ಯದಲ್ಲಿದ್ದ ಮಾಯಮ್ಮ.ಎಲ್ ರವರು ಆರೋಪಿತನನ್ನು ಹಿಡಿಯುವಲ್ಲಿ ಸಹಕರಿಸಿರುತ್ತಾರೆ. ಈ ಕಾರ್ಯಕ್ಕೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.