ಫಯಾಜ್ ನಿರ್ದೋಷಿಯಾದರೆ ನಾವೇ ಶಿಕ್ಷಿಸುತ್ತೇವೆ

0
16
ಮುತಾಲಿಕ

ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣದ ಆರೋಪಿ ಫಯಾಜ್ ಸಿಐಡಿ ತನಿಖೆಯಿಂದ ನಿರ್ದೋಷಿ ಎಂದು ಸಾಬೀತಾದರೆ, ಅವನಿಗೆ ನಾವೇ ತಕ್ಕ ಶಿಕ್ಷೆ ವಿಧಿಸುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ.
ನಗರದ ಬಿಡ್ನಾಳದ ನೇಹಾ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ, ತಂದೆ-ತಾಯಿಗೆ ಸಾಂತ್ವನ ಹೇಳಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸಿರುವುದು ಸ್ವಾಗತಾರ್ಹ. ಆದರೆ, ರಾಜ್ಯ ಸರ್ಕಾರ ಒತ್ತಡ ಹೇರಿ ತನಿಖೆಯ ದಿಕ್ಕು ತಪ್ಪಿಸಿದರೆ ಅದಕ್ಕೆ ತಕ್ಕ ಪಾಠ ಅನುಭವಿಸಬೇಕಾಗುತ್ತದೆ. ನಿರ್ದೋಷಿಯಾಗಿ ಫಯಾಜ್ ಹೊರಗೆ ಬಂದರೆ, ನಾವೇ ಶಿಕ್ಷೆ ವಿಧಿಸಿ ಜೈಲಿಗೆ ಹೋಗಲು ಸಿದ್ಧರಿದ್ದೇವೆ ಎಂದು ಹೇಳಿದರು.

Previous articleಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್: ಮುರುಘಾ ಶ್ರೀ ಮತ್ತೆ ಜೈಲಿಗೆ
Next articleಲವ್ ಜಿಹಾದ್ ನಡೆಸಿದರೆ ಸ್ಮಶಾನದಲ್ಲಿ ಜಾಗ ನೀಡಬೇಡಿ