ಫಲಿಸಿದ ಪ್ರಾರ್ಥನೆ: ಸಾವು ಗೆದ್ದ ಸಾತ್ವಿಕ್

0
11

ವಿಜಯಪುರ: 20 ಅಡಿಯ ಕೊಳವೆಬಾವಿಯಿಂದ ಬಾಲಕನನ್ನು ಯಶಸ್ವಿಯಾಗಿ ಹೊರೆತೆಗೆಯಲಾಗಿದೆ. ಸುಮಾರು 17 ಗಂಟೆಗೂ ಹೆಚ್ಚು ಕಾಲ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳು ನಡೆಸಿದ ರಕ್ಷಣಾ ಕಾರ್ಯಾಚರಣೆಯು ಫಲಿಸಿದಂತಾಗಿದೆ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್‌ ಸಾವು ಗೆದ್ದು ಬಂದಿದ್ದಾನೆ. ಬುಧವಾರ ಸಂಜೆ 6 ಗಂಟೆಗೆ ಕೊಳವೆ ಬಾವಿಗೆ ಬಿದ್ದ ಮಗು 18 ಗಂಟೆಗಳಿಂದ ಅನ್ನ ನೀರು ಇಲ್ಲದೆ ಜೀವನ್ಮರಣ ಹೋರಾಟ ನಡೆಸುತ್ತಿತ್ತು. ವೈದ್ಯರು ಬಾಲಕನ ಆರೋಗ್ಯ ತಪಾಸಣೆ ಮಾಡುತ್ತಿದ್ದು ಆರೋಗ್ಯ ದೃಢಪಡಿಸಿಕೊಂಡ ಬಳಿಕವೇ ಮಗುವನ್ನು ಕುಟುಂಬಸ್ಥರಿಗೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

Previous articleಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
Next articleಸಿಎಂ ಸ್ಥಾನದಿಂದ ವಜಾ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್