ಸಂ.ಕ. ಸಮಾಚಾರ, ಉಡುಪಿ: ಫೇಸ್ ಬುಕ್ ನಲ್ಲಿ ಜಾತಿ ಮತ್ತು ಧರ್ಮಗಳ ನಡುವೆ ವೈರತ್ವ ಮತ್ತು ಪ್ರಚೋದನಾತ್ಮಕ ಬರಹ ಪೋಸ್ಟ್ ಮಾಡಿರುವ ಆರೋಪದಲ್ಲಿ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ನಿವಾಸಿ ರತ್ನಾಕರ ಅಮೀನ್ ಎಂಬವರನ್ನು ಸೋಮವಾರ ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದವರು ತಿಳಿಸಿದ್ದಾರೆ.