Home ನಮ್ಮ ಜಿಲ್ಲೆ ಕಲಬುರಗಿ ಫೋಕ್ಸೋ ಪ್ರಕರಣ ದಾಖಲು: ಯುವಕನ ಬಂಧನ

ಫೋಕ್ಸೋ ಪ್ರಕರಣ ದಾಖಲು: ಯುವಕನ ಬಂಧನ

0

ವಾಡಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬೆಂಗಳೂರಿಗೆ ಕರೆದೋಯ್ದು ಮದುವೆ ಮಾಡಿಕೊಳ್ಳಲು ಯತ್ನಿಸಿದ್ದ ಯುವಕನನ್ನು ವಾಡಿ ಪೊಲೀಸರು ಬಂಧಿಸಿದ್ದು ಯುವಕನ ವಿರುದ್ಧ ಫೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಚಿತ್ತಾಪುರ ತಾಲ್ಲೂಕಿನ ನಾಲವಾರ ಗ್ರಾಮದ ನಿವಾಸಿ ಮಲ್ಲರಾಜ(24) ಬಂಧಿತ ಆರೋಪಿಯಾಗಿದ್ದಾನೆ. ಕೊಂಚೂರು ಗ್ರಾಮದ ನಿವಾಸಿಯಾಗಿರುವ ಬಾಲಕಿ ತಾಯಿ ನೀಡಿದ ದೂರಿನ ಅನ್ವಯ ಫೆ.18ರಂದು ಫೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಚಿತ್ತಾಪುರ ಸಿಪಿಐ ಚಂದ್ರಶೇಖರ ತಿಗಡಿ ಮಾರ್ಗದರ್ಶನದಲ್ಲಿ ವಾಡಿ ಪಿಎಸ್ಐ ತಿರುಮಲೇಶ ಕೆ ನೇತೃತ್ವದ ಪೊಲೀಸರು ಬೆಂಗಳೂರಿಗೆ ತೆರಳಿ ಆರೋಪಿಯನ್ನು ಬಂಧಿಸಿ ಕರೆ ತಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version