Home ಅಪರಾಧ ಬಂಟ್ವಾಳದಲ್ಲಿ ತಲಾವರಿನಿಂದ ಇರಿತ

ಬಂಟ್ವಾಳದಲ್ಲಿ ತಲಾವರಿನಿಂದ ಇರಿತ

0


ಸಂ. ಕ. ಸಮಾಚಾರ, ಮಂಗಳೂರು: ಯುವಕನಿಗೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಂಟ್ವಾಳ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಚೂರಿ ಇರಿತಕ್ಕೊಳಗಾದ ಯುವಕನನ್ನು ಇಲ್ಲಿನ ನಿವಾಸಿ, ಪೈಂಟರ್ ವೃತ್ತಿಯ ಅಬ್ದುಲ್ ಹಮೀದ್ ಯಾನೆ ಅಮ್ಮಿ. ಎಂದು ಗುರುತಿಸಲಾಗಿದೆ. ಇರಿತದಿಂದ ಹಮೀದ್ ಅವರ ಕೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಇಲ್ಲಿಯ ಕ್ಯಾಂಟೀನ್‌ನಲ್ಲಿ ತಂಪು ಪಾನೀಯ ಕುಡಿದು ಪೋನ್‌ನಲ್ಲಿ ಮಾತನಾಡುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ತಲವಾರಿನಿಂದ ಇರಿದು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು ಘಟನೆಗೆ ಕಾರಣ ತಿಳಿದು ಬಂದಿಲ್ಲ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version