ಬಜೆಟ್: ಉತ್ತರ ಕರ್ನಾಟಕಕ್ಕೆ ಹೆಚ್ಚು ಅನುಕೂಲ

0
6

ಬೆಂಗಳೂರು: ಕೃಷಿ ಮತ್ತು ಸಂಶೋಧನೆಯಲ್ಲಿ ಕರ್ನಾಟಕ ಹೆಚ್ಚು ಲಾಭ ಪಡೆದಿದೆ. ಬೆಂಗಳೂರು ಮತ್ತು ರಾಯಚೂರಿನಲ್ಲಿ ಇದರ ಉಪಯೋಗವಾಗಿದೆ. ಅದರಲ್ಲೂ ಹೆಚ್ಚು ಉತ್ತರ ಕರ್ನಾಟಕಕ್ಕೆ ಅನುಕೂಲ ಆಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಕೇಂದ್ರ ಸರ್ಕಾರದ ಬಜೆಟ್​ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆ, ಬಜೆಟ್​ನಲ್ಲಿ ಏನೂ‌ ಕೊಟ್ಟಿಲ್ಲ ಅಂತ ಕಾಂಗ್ರೆಸ್ ನಾಯಕರು​ ಆರೋಪ ಮಾಡುತ್ತಿದ್ದಾರೆ. ಇದು ಶುದ್ಧ ಸುಳ್ಳು, ರಾಜ್ಯ ಕಾಂಗ್ರೆಸ್ ಸರ್ಕಾರ​ ಸುಳ್ಳು ಹೇಳುತ್ತಿದೆ, ಯುಪಿಎ ಸರ್ಕಾರ ಇದ್ದಾಗ ರಾಜ್ಯಕ್ಕೆ 81,791 ಕೋಟಿ ರೂ. ನೀಡಿತ್ತು. ಆದರೆ 2014ರಿಂದ ಇಲ್ಲಿಯವರೆಗೆ ಎನ್​ಡಿಎ ಸರ್ಕಾರ 2,95,818 ಕೋಟಿ ರೂಪಾಯಿ ನೀಡಿದೆ. ಕಳೆದ 10 ವರ್ಷದಲ್ಲಿ 2,36,955 ಕೋಟಿ ತೆರಿಗೆ ಹಂಚಿಕೆಯಾಗಿದೆ. ಕಲಬುರಗಿಯ ಪಿಎಂ ಮಿತ್ರಾ ಮೆಗಾ ಟೆಕ್ಸ್‌ಟೈಲ್ಸ್ ಪಾರ್ಕ್‌ಗೆ 200 ಕೋಟಿ ಅನುದಾನ ನೀಡಲಾಗಿದೆ. ರೈಲ್ವೆ ಹಳಿಗಳ ನಿರ್ಮಾಣಕ್ಕೆ, 47,016 ಕೋಟಿ ಕಾಮಗಾರಿ ಪ್ರಗತಿಯಲ್ಲಿದೆ. ಕರ್ನಾಟಕದಲ್ಲಿ 7 ಒಂದೇ ಭಾರತ್ ರೈಲು ಸಂಚರಿಸುತ್ತಿವೆ, ರಾಜ್ಯದಲ್ಲಿ ಐಐಟಿ ಧಾರವಾಡ ಸ್ಥಾಪನೆ ಆಗಿದೆ. ತುಮಕೂರಿನಲಿ ಸೌತ್ ಇಂಡಿಯಾ ಕಾರಿಡಾರ್ ನಡೆಯುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಗಾಗಿ 6,428 ಕೋಟಿ ಅನುದಾನ ನೀಡಲಾಗಿದೆ. 7 ಸ್ಮಾರ್ಟ್ ಸಿಟಿ ನಿರ್ಮಾಣ ಮಾಡಲು ಒಪ್ಪಿಗೆ ನೀಡಲಾಗಿದ್ದು, 1,600 ಕೋಟಿ ವೆಚ್ಚದಲ್ಲಿ ಖಾಸಗಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಟೆಕ್ನಾಲಜಿ ಸೆಂಟರ್ ಬೆಂಗಳೂರಿನಲ್ಲಿ ನಿರ್ಮಾಣ ಮಾಡಲಾಗಿದೆ. ಸಂಶೋಧನೆ ಮತ್ತು ಅಭಿವೃದ್ಧಿಯಿಂದ ಬೆಂಗಳೂರಿಗೆ ಹೆಚ್ಚು ಉಪಯೋಗ ಆಗಲಿದೆ. ಬೆಂಗಳೂರಿನಲ್ಲಿ ಸ್ಪೇಸ್ ರಿಸರ್ಚ್ ಈ ಹಿಂದಿನಿಂದಲೂ ನಡೆಯುತ್ತಿದೆ. ಹೀಗಾಗಿ ರಿಸರ್ಚ್‌ಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಇದರಿಂದ ಹೆಚ್ಚು ಅನುಕೂಲ ಆಗಲಿದೆ. ಏಂಜೆಲ್ ಟ್ಯಾಕ್ಸ್ ಕೂಡ ಅನೇಕ ಜನರಿಗೆ ಲಾಭ ಆಗಲಿದೆ. ಕರ್ನಾಟಕ ಕೂಡ ಇದರ ಲಾಭ ಪಡೆಯಲಿದೆ ಎಂದರು.

Previous articleಪ್ರೀ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಪ್ರೀತಿ ಪವಾರ್
Next articleಪ್ರಜಾಪ್ರಭುತ್ವ ವಚನ ಚಳವಳಿಯ ಅಂತರಾಳ