ಬೆಂಗಳೂರು: ಬಡವರ ಕಲ್ಯಾಣವೇ ನಮ್ಮ ಆದ್ಯತೆ ಎಂದು ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ಬೆಂಗಳೂರಿನ ಕೆ.ಆರ್.ಪುರಂನಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಇಂದು ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಆವಾಸ್ ಯೋಜನೆ ಸರ್ವರಿಗೂ ಸೂರು ಯೋಜನೆಯಡಿ ನೀಡಲಾಗುವ ಮನೆಗಳ ಹಂಚಿಕೆ ಹಾಗೂ ಹಕ್ಕುಪತ್ರಗಳ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿರುವ ಅವರು ಅನ್ನ, ಆರೋಗ್ಯ , ಆಶ್ರಯ, ಅಕ್ಷರ ಇದೇ ನಮ್ಮ ಸರ್ಕಾರದ ಮೂಲಮಂತ್ರವಾಗಿದ್ದು, ಬಡವರ ಕಲ್ಯಾಣವೇ ನಮ್ಮ ಆದ್ಯತೆ. ಪ್ರಧಾನಮಂತ್ರಿ ಆವಾಸ್ ಯೋಜನೆ “ಸರ್ವರಿಗೂ ಸೂರು” ಯೋಜನೆಯಡಿ ರಾಜ್ಯದಾದ್ಯಂತ ನಿರ್ಮಾಣಗೊಳ್ಳುತ್ತಿರುವ 180253 ಮನೆಗಳ ಪೈಕಿ ಪೂರ್ಣಗೊಂಡಿರುವ 36789 ಮನೆಗಳನ್ನು ಇಂದು ಲೋಕಾರ್ಪಣೆ ಮಾಡಿದ್ದೇವೆ. ಅಲ್ಲದೆ ಕೊಳಗೇರಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಒತ್ತು ನೀಡಲಾಗಿದೆ. ಬಡ ವರ್ಗದ ಜನರಿಗೆ ನಮ್ಮ ಗ್ಯಾರಂಟಿಗಳು ನೆರವಾಗಿದ್ದು, ಅವರ ಏಳಿಗೆಗಾಗಿ ಹಲವು ಕಾರ್ಯಕ್ರಮ ರೂಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.