ಬಣಕಲ್ ಬಳಿ ಸರಣಿ ಅಪಘಾತ: ನಾಲ್ವರ ಸಾವು

0
10

ಚಿಕ್ಕಮಗಳೂರು: ಲಾರಿಗೆ ಓಮಿನಿ ಕಾರು ಡಿಕ್ಕಿ ಸೇರಿದಂತೆ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ ೨೩ ರಲ್ಲಿ ಶುಕ್ರವಾರ ನಡೆದಿದೆ.
ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದು ವಾಪಸ್ ಬರುತ್ತಿದ್ದಾಗ ಈ ಸರಣಿ ಅಪಘಾತ ಸಂಭವಿಸಿದೆ. ಮೃತರು ಚಿತ್ರದುರ್ಗ ಮೂಲದವರು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ
ಅಪಘಾತದಲ್ಲಿ ಕೆಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Previous articleತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ
Next articleಅಭಿವೃದ್ಧಿಯ ಅಸಲಿ ಮಾದರಿ “ಕರ್ನಾಟಕ ಮಾಡೆಲ್”