ಬದಲಿ ಅಭ್ಯರ್ಥಿಯಿಂದ ಪರೀಕ್ಷೆ ಕಾಂಗ್ರೆಸ್ ಕಾರ್ಯಕರ್ತೆ ಬಂಧನ

0
19

ಕಲಬುರಗಿ: ನಗರದ ಮಿಲಿಂದ್ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಬಂಧನಕ್ಕೆ ಒಳಗಾಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು, ರಾಜ್ಯಶಾಸ್ತ್ರ ಪರೀಕ್ಷೆ ಗುರುವಾರ ನಡೆದಿತ್ತು. ಈ ವೇಳೆ ಕಲಬುರಗಿ ನಗರದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಪರೀಕ್ಷೆ ಬರೆದಿದ್ದಾರೆ. ದಲಿತ ಸೇನೆ ಕಾರ್ಯಕರ್ತರು ಕಾಲೇಜಿಗೆ ತೆರಳಿ ಅಕ್ರಮ ಪ್ರಶ್ನಿಸಿದಾಗ ಬದಲಿ ಅಭ್ಯರ್ಥಿ ಪರೀಕ್ಷೆ ಬರೆದಿರುವುದು ಬೆಳಕಿಗೆ ಬಂದಿದೆ. ಸದ್ಯ ಮಿಲಿಂದ್ ಶಾಲೆಯ ಪ್ರಾಂಶುಪಾಲರು ಬ್ರಹ್ಮಪೂರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಸಂಪೂರ್ಣ ಪಾಟೀಲ್‌ಳನ್ನು ಬಂಧಿಸಿದ್ದಾರೆ.

Previous articleಅಣ್ಣ-ತಮ್ಮ ಸಾವು
Next articleಉಕ್ಕು ಕಾರ್ಖಾನೆ ಸಿದ್ಧತಾ ಕಾರ್ಯ ಸ್ಥಗಿತ