ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

0
14

ನವದೆಹಲಿ: ಕೇಂದ್ರ ಸರ್ಕಾರ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.
ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು.
ಒಂದು ವಾರದಲ್ಲಿ ಬರ ಪರಿಹಾರದ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಹಾಗಾಗಿ, ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯವು ಒಂದು ವಾರ ಸಮಯಾವಕಾಶ ನೀಡಬೇಕು” ಎಂದು ಅಟಾರ್ನಿ ಜನರಲ್‌ ಆರ್‌.ವೆಂಕಟರಮಣಿ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಏಪ್ರಿಲ್‌ 29ಕ್ಕೆ ವಿಚಾರಣೆ ಮುಂದೂಡಿತ್ತು. ಈಗ ವಿಚಾರಣೆಗೂ ಮೊದಲೇ ಬರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ 18,174 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಕೆ ಮಾಡಿತ್ತು. ಸದ್ಯ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3455 ಕೋಟಿ ರೂಪಾಯಿಗಳನ್ನು ಮಾತ್ರ ಬಿಡುಗಡೆ ಮಾಡಿದೆ. ತಮಿಳುನಾಡಿಗೆ 275 ಕೋಟಿ ರೂಪಾಯಿ ಪರಿಹಾರವನ್ನು ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಘೋಷಿಸಿದೆ.

Previous articleಹಾಸ್ಟೆಲ್​ ಆಹಾರ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ತ
Next articleಬರ ಪರಿಹಾರ: ಕೇಂದ್ರ ಸರ್ಕಾರದ ಕಳಕಳಿ ತೋರಿಸುತ್ತದೆ