ಬಿಮ್ಸ್ ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ
ಬಳ್ಳಾರಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದೆ.
ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ನಿವಾಸಿ ಮಹಾದೇವಿ (21) ಮೃತ ಬಾಣಂತಿ ಎಂದು ಗುರುತಿಸಲಾಗಿದೆ. ಮಹಾದೇವಿ ಅವರಿಗೆ ಜನವರಿ 25ರಂದು ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಹೆರಿಗೆಯಾಗಿ ವಾರದ ಬಳಿಕ ಮಹಾದೇವಿ ಸಾವನ್ನಪ್ಪಿದ್ದಾಳೆ. ಜನವರಿ 25 ರಂದು ಮಹಾದೇವಿಗೆ ವೈದ್ಯರು ಸಿಜರೀನ್ ಮಾಡಿದ್ದರು. ಮಹಾದೇವಿ ಹೆಣ್ಣುಗುವಿಗೆ ಜನ್ಮ ನೀಡಿದ್ದಳು. ಮಗು ಹಾಗೂ ತಾಯಿ ಆರೋಗ್ಯವಾಗಿದ್ದರು. ಹೆರಿಗೆಯಾದ ಐದು ದಿನದ ಬಳಿಕ ಮಹಾದೇವಿಗೆ ಇನ್ಫೆಕ್ಷನ್ ಆಗಿದೆ ಎಂದು ವೈದ್ಯರು ಹೇಳಿದ್ದರಂತೆ. ನಿನ್ನೆ ರಾತ್ರಿ ಮಹಾದೇವಿ ತೀವ್ರ ಅಸ್ವಸ್ಥರಾಗಿ ಇಂದು(ಶನಿವಾರ) ಬೆಳಗಿನ ಜಾವ ಮೃತಪಟ್ಟಿದ್ದಾಳೆ. ವೈದ್ಯರ ನಿರ್ಲಕ್ಷ್ಯದಿಂದ ಮಹಾದೇವಿ ಸಾವಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಮ್ಸ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.