ಬಳ್ಳಾರಿ ಪ್ರವೇಶಕ್ಕೆ ಜನಾರ್ದನ ರೆಡ್ಡಿಗೆ ಅನುಮತಿ ನೀಡಿದ ಸುಪ್ರೀಂಕೋರ್ಟ್

0
19

ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸುಪ್ರೀಂಕೊರ್ಟ್ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧವನ್ನ ತೆರವುಗೊಳಿಸಿದೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಿದೆ, ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದ ಷರತ್ತನ್ನು ತೆರುವು ಮಾಡುವಂತೆ ಕೋರಿ ಜನಾರ್ದನ ರೆಡ್ಡಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದರು. ನಂತರ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 2015 ರ ಜನವರಿ 23 ರಂದು ಸುಪ್ರೀಂ ಕೋರ್ಟ್‌ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ, ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುಮತಿ ಪಡೆಯವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿತ್ತು.

Previous articleಚಕ್ರವರ್ತಿ ಜೀವನ ಸಾಧನೆ ಪ್ರೇರಣೆಯಾಗಲಿ
Next articleಕರ್ನಾಟಕದಲ್ಲಿ ಸೆಮಿಕಂಡಕ್ಟರ್ ಸರಪಳಿ