Home ತಾಜಾ ಸುದ್ದಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ: ತಪ್ಪಿದ ಅನಾಹುತ

ಬಸ್‌ನಲ್ಲಿ ಆಕಸ್ಮಿಕ ಬೆಂಕಿ: ತಪ್ಪಿದ ಅನಾಹುತ

0

ಬೆಳಗಾವಿ (ಯಮಕನಮರಡಿ): ನಿಪ್ಪಾಣಿಯಿಂದ ಬೆಳಗಾವಿ ಕಡಗೆ ರಾಷ್ಟ್ರೀಯ ಹೆದ್ದಾರಿ 4ರ ಮೂಲಕ ಸಮೀಪದ ನರಸಿಂಗಪೂರ ಗ್ರಾಮದ ಬಳಿ ಶನಿವಾರ ಸಂಜೆ ಹೊರಟಿದ್ದ ನಿಪ್ಪಾಣಿ ಡಿಪೊ ವಿಭಾಗದ ಸಾರಿಗೆ ಬಸ್‌ನಲ್ಲಿ ವೈಯರ್ ಶಾರ್ಟ್‌ ಸರ್ಕಿಟ್‌ನಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತು.
ಬಸ್‌ ಚಾಲಕ ತಕ್ಷಣ ವಾಹನವನ್ನು ರಸ್ತೆ ಬದಿ ನಿಲ್ಲಿಸಿ ಬಸ್‌ನಲ್ಲಿದ್ದ 45ಕ್ಕೂ ಹೆಚ್ಚು ಪ್ರಯಾಣಿಕರನ್ನು ಕೆಳಗೆ ಇಳಿಸಿದರು. ಹಾಗಾಗಿ ಬಾರಿ ಪ್ರಮಾಣದ ಅನಾಹುತ ತಪ್ಪಿದೆ. ಘಟನಾ ಸ್ಥಳಕ್ಕೆ ಬಂದ ಹತ್ತರಗಿ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version