ಬಸ್ ಅಪಘಾತ: ೧೫ ಪ್ರಯಾಣಿಕರಿಗೆ ಗಾಯ

0
6

ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರೈಲ್ವೆ ಗೇಟ್ ಬಳಿಯು ಕಂಬಕ್ಕೆ ಡಿಕ್ಕಿಯಾಗಿದ್ದು, ೧೫ ಪ್ರಯಾಣಿಕರು ಗಾಯಗೊಂಡ ಘಟನೆ ನಗರದ ಕಿಡದಾಳ ರಸ್ತೆಯ ರೈಲ್ವೆ ಗೇಟ್ ಬಳಿ ಸೋಮವಾರ ಸಂಭವಿಸಿದೆ.
ಗಂಗಾವತಿಯಿಂದ ಕೊಪ್ಪಳ ನಗರಕ್ಕೆ ಆಗಮಿಸುತ್ತಿರುವಾಗ ಘಟನೆ ಸಂಭವಿಸಿದೆ. ಬಸ್ ವಾಪಸ್ ಹಿಮ್ಮುಖವಾಗಿ ಚಲಿಸಿ ತಗ್ಗು ಪ್ರದೇಶಕ್ಕೆ ಹೋಗಿ ನಿಂತಿದೆ. ಇದರಿಂದಾಗಿ ವಾಹನ ಚಾಲಕ ಸೇರಿ ೧೫ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳನ್ನು ನಗರದ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಗದಗ ಜಿಲ್ಲೆ ಒಳಚರಂಡಿ ಅಭಿವೃದ್ಧಿಗೆ 30 ಕೋಟಿ ರೂ. ಅನುದಾನ
Next articleಕರಡಿಗಳ ದಾಳಿ: ವ್ಯಕ್ತಿಗೆ ಗಂಭೀರ ಗಾಯ