ಬಸ್‌ ಪಲ್ಟಿ: 20ಕ್ಕೂ ಹೆಚ್ಚು ಜನರಿಗೆ ಗಾಯ

0
38

ಸಾಗರ: ಪ್ರವಾಸಕ್ಕೆಂದು ಹೊರಟಿದ್ದ ಬಸ್‌ ಪಲ್ಟಿಯಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಸಾಗರ ತಾಲೂಕಿನ ಮುಪ್ಪಾನೆ ಬಳಿ ನಡೆದಿದೆ.
ಘಟನೆಯಲ್ಲಿ 15ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳಿಗೆ ಕಾರ್ಗಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಮಂಗಳೂರು ಆಸ್ಪತ್ರೆಗೆ ಕಳುಹಿಸಲಾಗಿದೆ.
ಬಸ್ಸಿನಲ್ಲಿ ಸುಮಾರು 55 ಪ್ರಯಾಣಿಕರಿದ್ದು, ಇವರು ಬಿ.ಸಿ.ರೋಡ್‌ನಿಂದ ಟೂರಿಸ್ಟ್ ಪ್ಯಾಕೇಜ್‌ನಲ್ಲಿ ಆಗಮಿಸಿದ್ದರು ಎಂದು ತಿಳಿದು ಬಂದಿದೆ. ಆಸ್ಪತ್ರೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

Previous articleಆಸ್ಪತ್ರೆಗೆ ದಾಖಲಾದ ತಬಲಾ ಮಾಂತ್ರಿಕ
Next articleಜಾಕೀರ್ ಹುಸೇನ್ ನಿಧನ ಬಗ್ಗೆ ವದಂತಿ