ಬಸ್ ಪಲ್ಟಿ: 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

0
18

ಗದಗ : ಕೆಎಸ್‌ಆರ್ಟಿಸಿ ಬಸ್ ಪಲ್ಟಿಯಾಗಿ ಆಗಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದ್ದು, ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗುತ್ತಿದ್ದಂತೆ ಪ್ರಯಾಣಿಕರ ಕೂಗಾಟದಿಂದಾಗಿ ಸ್ಥಳೀಯ ಗ್ರಾಮಸ್ಥರು ಬಂದು ಬಸ್ಸಿನ ಮುಂದಿನ ಗ್ಲಾಸ್ ಒಡೆದು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಕಾಂಗ್ರೆಸ್‌ನವರು ಭಾರತ ಮಾತಾಕಿ ಜೈ ಎಂದರೆ, ಭಾರತ ಮಾತೆ ಖುಷಿ ಪಡುತ್ತಾಳೆ
Next articleಮಳೆರಾಯನ ಆರ್ಭಟ: ಸಿಡಿಲಿಗೆ ಓರ್ವ ಬಲಿ