ಬಸ್‌-ಬೈಕ್‌ ಅಪಘಾತ: ಇಬ್ಬರು ಮಕ್ಕಳು ಸಾವು

0
40

ರಾಮನಗರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲುದೊಡ್ಡಿ ಗ್ರಾಮದ ಬಳಿ ನಡೆದಿದೆ.
ತಮಿಳುನಾಡಿನ ಡೆಂಕಣಿಕೋಟೆಯ ಬೋಕಸಂದ್ರ ಗ್ರಾಮದ ಭೈರಪ್ಪ ಎಂಬವರ ಮಕ್ಕಳಾದ ಪ್ರದೀಪ್(5), ಭವ್ಯ (3)ಎಂದು ಮೃತ ಮಕ್ಕಳೆಂದು ಗುರುತಿಸಲಾಗಿದೆ.
ಬೈಕ್ ಸವಾರ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕನಕಪುರದಿಂದ ರಾಮನಗರಕ್ಕೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Previous articleಬಸ್‌-ಕ್ಯಾಂಟರ್‌ ಮಧ್ಯೆ ಅಪಘಾತ: ನಾಲ್ವರು ಸಾವು
Next articleರಸ್ತೆ ಅಪಘಾತದಲ್ಲಿ ಬೆಳಗಾವಿ ಯೋಧ ಸಾವು