ಬೆಳಗಾವಿ: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮಖಂಡಿಯ ಹೊಸ ಬಬಲಾದಿ ಮಠದ ಸದಾಶಿವ ಹಿರೇಮಠ ಸ್ವಾಮೀಜಿಯನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಗೋಕಾಕಿನ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ನಡೆದಿದ್ದ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿಯಿಂದಲೇ ಸದಾಶಿವ ಹಿರೇಮಠ ಸ್ವಾಮೀಜಿ ಖಾತೆಗೆ ಲಕ್ಷ ಲಕ್ಷ ಹಣ ವರ್ಗಾವಣೆ ಆಗಿದೆ. 60 ಲಕ್ಷಕ್ಕೂ ಅಧಿಕ ಹಣ ಸ್ವಾಮೀಜಿ ಹಾಗೂ ಸ್ವಾಮೀಜಿ ಪತ್ನಿ ಹಾಗೂ ಪುತ್ರನ ಖಾತೆಗೆ ಈ ಹಣ ವರ್ಗಾವಣೆ ಆಗಿದೆ. ಇದಲ್ಲದೇ ಆರೋಪಿ ಹೊಸ ಬಬಲಾದಿ ಮಠದ ಜಾತ್ರೆ ಹಾಗೂ ಅನ್ನ ಸಂತರ್ಪಣೆಗೆ ಲಕ್ಷಾಂತರ ಹಣ ನೀಡಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆಯೇ ಸದಾಶಿವ ಹಿರೇಮಠ ಸ್ವಾಮೀಜಿಯನ್ನು ಸಿಐಡಿ ವಶಕ್ಕೆ ಪಡೆದಿದ್ದು, ಗೋಕಾಕ ನಗರ ಠಾಣೆಯಲ್ಲಿ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.