ನವದೆಹಲಿ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸರ್ಕಾರ ಸಂಪರ್ಕದಲ್ಲಿದೆ ಮತ್ತು ಅಲ್ಪಸಂಖ್ಯಾತರ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ . ರಾಜ್ಯಸಭೆಯಲ್ಲಿ ಮಾತನಾಡಿದ ಜೈಶಂಕರ್, ಬಾಂಗ್ಲಾದೇಶದಲ್ಲಿ ಅತಿರೇಕದ ಲೂಟಿ ಮತ್ತು ಗಲಭೆಗಳ ವರದಿಗಳ ಮಧ್ಯೆ ಗಡಿ ಕಾವಲು ಪಡೆಗಳಿಗೆ “ಅಸಾಧಾರಣ ಎಚ್ಚರಿಕೆ” ಯನ್ನು ಸೂಚಿಸಲಾಗಿದೆ ಎಂದು ಹೇಳಿದರು. ಬಾಂಗ್ಲಾದೇಶದಲ್ಲಿರುವ 19,000 ಭಾರತೀಯರಲ್ಲಿ ಸುಮಾರು 9,000 ಜನರು, ಹೆಚ್ಚಾಗಿ ವಿದ್ಯಾರ್ಥಿಗಳು ಹಿಂದಿರುಗಿದ್ದಾರೆ, ನಾವು ನಮ್ಮ ರಾಜತಾಂತ್ರಿಕ ಸಮುದಾಯದ ಮೂಲಕ ಬಾಂಗ್ಲಾದೇಶದಲ್ಲಿರುವ ಭಾರತೀಯರೊಂದಿಗೆ ನಿಕಟ ಮತ್ತು ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಅವರು ಹೇಳಿದರು.