ಬೆಂಗಳೂರು: ಬಾಂಬರ್ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು NIA ತಿಳಿಸಿದೆ
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಯ ಪೋಟೋ NIA ಬಿಡುಗಡೆ ಮಾಡಿದ್ದು ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ. ಆರೋಪಿ ಬಗ್ಗೆ ಮಾಹಿತಿ ನೀಡಲು ದೂರವಾಣಿ ಸಂಖ್ಯೆಯನ್ನು ನೀಡಿದ್ದಾರೆ, ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಸ್ಪಷ್ಟಪಡಿಸಿದೆ.