ದೆಹಲಿ ವಿಶ್ವವಿದ್ಯಾಲಯದ ರಾಮ್ ಲಾಲ್ ಆನಂದ್ ಕಾಲೇಜಿನ ಸಿಬ್ಬಂದಿಗೆ ಸುಮಾರು 9:34ಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಕಾಲೇಜಿಗೆ ತಲುಪಿ, ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ಹುಡುಕಾಟ ಮತ್ತು ಪರಿಶೀಲನೆ ನಡೆಸಿದ್ದಾರೆ. ಇಲ್ಲಿಯವರೆಗೆ, ಅನುಮಾನಾಸ್ಪದ ಏನೂ ಕಂಡುಬಂದಿಲ್ಲ. ಮುಂದಿನ ಕ್ರಮಗಳು ನಡೆಯುತ್ತಿವೆ ಎಂದು ಡಿಸಿಪಿ ನೈಋತ್ಯ ರೋಹಿತ್ ಮೀನಾ ತಿಳಿಸಿದ್ದಾರೆ.