ಬೆಂಗಳೂರು: ಬಾಗಲಕೋಟೆ ಜಿಲ್ಲಿಯ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಸ್ಕೂಲ್ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಂಭವಿಸಿದ ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನುಳಿದ ಮೂವರು ಮಕ್ಕಳು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.
ಆಲಗೂರಿಲ್ಲಿರುವ ವರ್ಧಮಾನ ಶಾಲೆಯ ವಿದ್ಯಾರ್ಥಿಗಳಾಗಿರುವ ಮೃತರು ರವಿವಾರ ಸಂಜೆ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಭಾಗವಹಿಸಿ ಕವಟಗಿ ಗ್ರಾಮದ ಕಡೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.