ಬಾಣಂತಿಯರ ಸಾವಿಗೆ ಸರ್ಕಾರದ ಬೇಜವಾಬ್ದಾರಿಯೇ ಕಾರಣ

0
19

ಹುಬ್ಬಳ್ಳಿ: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ ಸರ್ಕಾರದ ಬೇಜವಾಬ್ದಾರಿಯಿಂದ ಆಗಿರುವತಹದ್ದು, ಇದು ನಾಚಿಕೆಗೇಡಿನ ಸಂಗತಿಯಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಮುಂದುವರಿದ ಇಂತಹ ಕಾಲದಲ್ಲೂ ಬಾಣಂತಿಯರ ಸರಣಿ ಸಾವು ಸಂಭವಿಸಿರುವುದು ಆಘಾತಕಾರಿಯಾದುದು ಎಂದು ಕೇಂದ್ರ ಆಹಾರ ಖಾತೆ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಣಂತಿಯರ ಸಾವು ಸಂಭವಿಸಿ ಮೂರ್ನಾಲ್ಕು ದಿನಗಳಾದರೂ ಸರ್ಕಾರದ ಜವಾಬ್ದಾರಿ ಇರುವಂತಹ ಸಚಿವರಾಗಲಿ ಯಾರೂ ಹೋಗಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಮೇಲೂ ಹೋಗಿರಲಿಲ್ಲ. ಆರೋಗ್ಯ ಸಚಿವ ದಿನೇಶ ಗುಂಡೂರಾವ್, ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು, ಮುಖ್ಯಮಂತ್ರಿಯವರು ಏನೇನೊ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಇದು ಅತ್ಯಂತ ಬೇಜವಾಬ್ದಾರಿತನದ ಪ್ರವೃತ್ತಿಯಾಗಿದೆ. ವಿರೋಧ ಪಕ್ಷದ ನಾಯಕರು ಭೇಟಿ ನೀಡಿದ ಬಳಿಕ ಇವರು ಹೋಗಿದ್ದಾರೆ ಎಂದು ಕಿಡಿಕಾರಿದರು.
ನಾನು ಈ ವಿಷಯವನ್ನು ರಾಜಕೀಯಗೊಳಿಸಲು ಹೋಗುವುದಿಲ್ಲ. ಏನು ತಪ್ಪಾಗಿದೆಯೋ ಅದನ್ನು ಸರ್ಕಾರ ಸರಿಪಡಿಸಬೇಕು ಎಂದು ಒತ್ತಾಯಿಸುತ್ತೇವೆ ಎಂದು ಹೇಳಿದರು.

Previous articleಮೃತ ಬಾಣಂತಿಯರ ಕುಟುಂಬಕ್ಕೆ ಐದು ಲಕ್ಷ ಪರಿಹಾರ
Next articleಅಧಿವೇಶನ ಸಿದ್ಧತೆ ಪರಿಶೀಲಿಸಿದ ಸಭಾಧ್ಯಕ್ಷರು